HomeKarnatakaBIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ...

BIG NEWS: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ; ಪೋಕ್ಸೋ ಕೇಸ್ ದಾಖಲು; ಶಿಕ್ಷಕ ಪೊಲೀಸ್ ವಶಕ್ಕೆ

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ.

ಶಿಕ್ಷಕ ವಿರಾಜ್ ಜೈನ್ ವಿರುದ್ಧ ಲೈಂಗಿಕ ಕಿರುಕುಳ ನಿಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿನಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ.

ಶಿಕ್ಷಕನ ಕಾಟಕ್ಕೆ ಭಯಗೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾಳೆ ಈ ವೇಳೆ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶಿಕ್ಷಕ ವಿರಾಜ್ ಜೈನ್ ಕಳೆದ ಒಂದು ವರ್ಷದಿಂದ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕನ ವಿರುದ್ಧ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular