HomeKarnatakaಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ...

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕರಡಿ ಸಂಗಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ಕೂಡ ಅವರು ರಾಜೀನಾಮೆ ನೀಡಿದ್ದಾರೆ. ಇ-ಮೇಲ್ ಮೂಲಕ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.

ನಾಳೆ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಕೊಪ್ಪಳದಿಂದ ಬೆಂಗಳೂರಿಗೆ ಆಗಮಿಸಿರುವ ಸಂಗಣ್ಣ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೊಪ್ಪಳದಿಂದ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular