HomeKarnatakaದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದ ಶಿವಣ್ಣ, ದ್ವಾರಕೀಶ್ ನಿಧನ ಸುದ್ದಿ ತಿಳಿಯುತ್ತಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ದ್ವಾರಕೀಶ್ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ನಾವು ಚಿಕ್ಕವರಾಗಿದ್ದಾಗಿನಿಂದಲೂ ದ್ವಾರಕೀಶ್ ಅವರನ್ನು ನೋಡುತ್ತಿದ್ದೆವು. ಅವರ ಇಲ್ಲ ಎನ್ನುವುದನ್ನು ಕಲ್ಪಿಸಿಕೊಳ್ಳಲು ಆಗುತ್ತಿಲ್ಲ. ಅಪ್ಪಾಜಿ, ದ್ವಾರಕೀಶ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ದ್ವಾರಕೀಶ್ ನಮ್ಮ ಕುಟುಂಬದ ಸದಸ್ಯರಿದ್ದಂತೆ. ಅವರು ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಯಾರು ಮರೆಯಲಾಗದು. ಅವರ ಕುಟುಂಬದ ಜೊತೆ ನಾವೆಲ್ಲರೂ ಇದ್ದೇವೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular