HomeKarnatakaBREAKING NEWS: ಕಾಂಗ್ರೆಸ್ ಗೆ ಬಿಗ್ ಶಾಕ್: ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ...

BREAKING NEWS: ಕಾಂಗ್ರೆಸ್ ಗೆ ಬಿಗ್ ಶಾಕ್: ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅವರು, ರಾಮನವಮಿ ದಿನ ಬಿಜೆಪಿ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲ್ಲಿಸುವ ಜವಾಬ್ದಾರಿ ಇದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ತರುವುದು ನಮ್ಮ ಗುರಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular