HomeKarnatakaಸೋಲಿನ ಭೀತಿಯಿಂದ ಬಿಜೆಪಿ –ಜೆಡಿಎಸ್ ಅಪವಿತ್ರ ಮೈತ್ರಿ: ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಸಿಎಂ...

ಸೋಲಿನ ಭೀತಿಯಿಂದ ಬಿಜೆಪಿ –ಜೆಡಿಎಸ್ ಅಪವಿತ್ರ ಮೈತ್ರಿ: ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಸಿಎಂ ಸಿದ್ಧರಾಮಯ್ಯ

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಮೋದಿ ಪ್ರಧಾನಿ ಆದರೆ ದೇಶ ಬಿಡುವುದಾಗಿ ದೇವೇಗೌಡರು ಹೇಳಿದ್ದರು. ಈಗ ಒಂದಾಗಿದ್ದಾರೆ. ಲೋಕಸಭೆ ಚುನಾವಣೆಗಾಗಿ ಬಿಜೆಪಿ, ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿದ್ದಾರೆ.

ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಿದ್ದಾರೆ. ಅವರು ಭ್ರಮೆಯಲ್ಲಿದ್ದಾರೆ. ಆದರೆ, ಐದು ವರ್ಷ ನಮ್ಮ ಸರ್ಕಾರ ಇರಲಿದೆ. ಕೋಮುವಾದಿ ಪಕ್ಷದ ಜೊತೆ ಹೋಗಿರುವ ನೀವು ಜಾತ್ಯಾತೀತ ಪದ ತೆಗೆಯಿರಿ ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಹೇಳಿದ್ದಕ್ಕೆ ಸಿದ್ದರಾಮಯ್ಯಗೆ ಗರ್ವ ಬಂದಿದೆ. ಅವರ ಗರ್ವಭಂಗ ಮಾಡುತ್ತೇವೆ ಎಂದು ಕಿಡಿ ಕಾರುತ್ತಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಜನತೆ ಕಾಂಗ್ರೆಸ್ ಕೈ ಹಿಡಿಯುತ್ತಾರೆ. ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular