HomeKarnatakaಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು

ಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಮತದಾರರಿಗೆ ಆಮಿಷವೊಡ್ಡಿದ ಆರೋಪದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 14ರಂದು ನಾಯಕನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಡಿ. ಸುಧಾಕರ್ ಮಾತನಾಡಿ, ನಾಯಕನಹಟ್ಟಿ ಮತ್ತು ತಳಕು ಭಾಗದಲ್ಲಿ ಕಾಂಗ್ರೆಸ್ ಗೆ 70 ಸಾವಿರ ಲೀಡ್ ಕೊಟ್ಟರೆ ಈ ಭಾಗಕ್ಕೆ 25 ಕೋಟಿ ರೂ. ಅನುದಾನ ಕೊಡುವುದಾಗಿ ಭರವಸೆ ನೀಡಿದ್ದರು.

ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡಿದ ಪ್ರಕರಣ ಇದಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ಮಂಜುನಾಥ್ ದೂರು ದಾಖಲಿಸಿದ್ದು, ನಾಯಕನಹಟ್ಟಿಯಲ್ಲಿ ಸಚಿವ ಸುಧಾಕರ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular