HomeKarnatakaಮತ್ತೊಂದು ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮತ್ತೊಂದು ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಶೋಕ ಶಿಲಾಶಾಸನ ರಸ್ತೆಯಲ್ಲಿ ನಡೆದಿದೆ.

ಸಿಂಧನೂರು ಮೂಲದ ಶಮೀದ್ (22) ಹಾಗೂ ಸಲ್ಮಾ (10) ಮೃತ ದುರ್ದೈವಿಗಳು. ಸಿಂಧನೂರಿನಿಂದ ಮುದಗಲ್ ಗ್ರಾಮಕ್ಕೆ ಮದುವೆಗೆಂದು ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಎದುರಿನಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular