ಹುಬ್ಬಳ್ಳಿ: ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಾಲೇಜು ಕ್ಯಾಂಪಸ್ ಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ, ಭದ್ರತೆ ಇಲ್ಲದಂತಾಗಿದ್ದು, ಹಾಡಹಗಲೇ ಕೊಲೆ ಪ್ರಕರಣಗಳು ನಡೆಯುತ್ತಿವೆ. ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಯುವಕ ಕ್ರೌರ್ಯ ಮೆರೆದಿದ್ದಾನೆ. ಕುತ್ತಿಗೆಗೆ ಚಾಕು ಹಾಕಿದ್ದು, ಚಾಕು ಹಾಕಲು ಎಲ್ಲೋ ತರಬೇತಿ ಪಡೆದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿದ ಮುತಾಲಿಕ್ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.