ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ಇಂದು ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಮತ ಯಾಚಿಸಲಿದ್ದಾರೆ. ಬಿದರಗುಪ್ಪೆ, ಅತ್ತಿಬೆಲೆ, ಚಂದಾಪುರ, ಹೆಬ್ಬಗೋಡಿಯಲ್ಲಿ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಬಿದರಗುಪ್ಪೆಯಿಂದ ಬೈಕ್ ರ್ಯಾಲಿ ಮೂಲಕ ಪವನ್ ಕಲ್ಯಾಣ್ ಭರ್ಜರಿ ಪ್ರಚಾರ ನಡೆಸಲಿದ್ದು, ನಂತರ ರೋಡ್ ಶೋ ಮೂಲಕ ಮತ ಯಾಚಿಸಲಿದ್ದಾರೆ.