alex Certify ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜು. 7ರ ಬದಲು ಜು. 21ಕ್ಕೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜು. 7ರ ಬದಲು ಜು. 21ಕ್ಕೆ ನಿಗದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ್ದ ಕೆಎಎಸ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ.

ಜುಲೈ 7ರ ಬದಲಿಗೆ ಜುಲೈ 21ರಂದು ಪರೀಕ್ಷೆ ನಿಗದಿಪಡಿಸಿ ಹೊಸದಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಈ ಮೊದಲು ಮೇ ತಿಂಗಳಲ್ಲಿ ಪೂರ್ವಭಾವಿ ಪರೀಕ್ಷೆ ನಿಗದಿಪಡಿಸಲಾಗಿತ್ತು. ಲೋಕಸಭೆ ಚುನಾವಣೆಯ ಕಾರಣಕ್ಕೆ ಮತ್ತು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡುವ ಉದ್ದೇಶದಿಂದ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಜುಲೈ 7 ರಂದು ನಿಗದಿಪಡಿಸಲಾಗಿತ್ತು.

ಜುಲೈ 7 ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫಒ ಪರೀಕ್ಷೆ ಇರುವುದರಿಂದ ಅನೇಕ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 21ಕ್ಕೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...