HomeKarnatakaBREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

BREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ತುಮಕೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ವೈಯಕ್ತಿಕವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಪೊಲೀಸರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಏಪ್ರಿಲ್ 13ರಂದು ಗುಬ್ಬಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಡೆದ ಪ್ರಚಾರ ಸಭೆಯಲ್ಲಿ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್.ಡಿ.ಕುಮಾರಸ್ವಾಮಿ, ಕೊತ್ವಾಲ್ ಗರಡಿಯಿಂದ ಬಂದವರು. ಹಣ ದಾಹಕ್ಕೆ ಏನು ಬೇಕಾದ್ರೂ ಮಾಡ್ತಾರೆ ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಹೆಚ್.ಡಿ.ಕೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular