HomeKarnatakaBREAKING NEWS: ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡ; ಥಿನ್ನರ್ ತಯಾರಿಕ ಘಟಕದಲ್ಲಿ ಬೆಂಕಿ

BREAKING NEWS: ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡ; ಥಿನ್ನರ್ ತಯಾರಿಕ ಘಟಕದಲ್ಲಿ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿವೆ. ಥಿನ್ನರ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದ ಅಂಬೇಡ್ಕರ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ಮಾ ಟ್ರೇಡರ್ಸ್ ಹೆಸರಿನ ಥಿನ್ನರ್ ತಯಾರಿಕಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿದೆ.

ಬೆಂಕಿಯ ತೀವ್ರತೆಗೆ ಥಿನ್ನರ್ ಕ್ಯಾನ್ ಗಳು ಸ್ಫೋಟಗೊಳ್ಳುತ್ತಿವೆ. ಅಕ್ಕಪಕ್ಕದ ಕಾರ್ಖಾನೆಗಳಿಗೂ ಬೆಂಕಿ ವ್ಯಾಪಿಸುವ ಆತಂಕ ಎದುರಾಗಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ಕಾರ್ಖಾನೆಯಲ್ಲಿ ಕಾರ್ಮಿಕರು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular