ಧಾರವಾಡ: ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಹಿಂಪಡೆದಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕರಾದ ಸಚಿನ್ ಪಾಟೀಲ್ ಹಾಗೂ ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರವನ್ನು ಚುನಾವಣಾ ಆಯೋಗದಿಂದ ವಾಪಾಸ್ ತರಿಸಿಕೊಳ್ಳುವ ಮೂಲಕ ಸ್ಪರ್ಧಾ ಕಣದಿದ ಹಿಂದೆ ಸರಿದಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ದಿಂಗಾಲೇಶ್ವರ ಸ್ವಾಮೀಜಿ, ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿ ನಾಮಪತ್ರ ಸಲ್ಲಿಸಿದ್ದರು. ಇವರ ಸ್ಪರ್ಧೆಗೆ ವೀರಶೈವ ಮಹಾಸಭಾ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಉತರ ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರವನ್ನು ವಿರೋಧಿಸಿದ್ದರು. ಇದೀಗ ಅಂತಿಮವಾಗಿ ನಾಮಪತ್ರ ಹಿಂಪಡೆದಿದ್ದಾರೆ.