HomeKarnatakaBIG NEWS: ಚೊಂಬು ಜಾಹೀರಾತಿನಿಂದ ಬಿಜೆಪಿಗೆ ಎಚ್ಚರವಾಯ್ತಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

BIG NEWS: ಚೊಂಬು ಜಾಹೀರಾತಿನಿಂದ ಬಿಜೆಪಿಗೆ ಎಚ್ಚರವಾಯ್ತಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ನಮ್ಮ ಖಾಲಿ ಚೊಂಬು ಜಾಹೀರಾತಿನಿಂದ ಪ್ರತಿಪಕ್ಷಗಳ ನಾಯಕರಿಗೆ ಎಚ್ಚರವಾಯ್ತಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಜಾಹೀರಾತಿಗೆ ಈಗ ಬಿಜೆಪಿಯವರು ಜಾಹೀರಾತು ನೀಡಿದ್ದು, ನಮ್ಮ ಜನರಿಗೆ ಯಾವುದು ಸರಿ, ಯಾವುದು ತಪ್ಪು ಎಂದು ಯೋಚನೆ ಮಾಡುವ ಶಕ್ತಿ, ಪ್ರಜ್ಞೆ ಎರಡೂ ಇದೆ ಎಂದು ಹೇಳಿದರು.

ಕರ್ನಾಟಕದ ಜನರಿಗೆ ಬಿಜೆಪಿ ಬಹಳ ಅನ್ಯಾಯ ಮಾಡಿದೆ ಎಂದು ಈ ಹಿಂದೆ ದೇವೇಗೌಡರು, ಕುಮಾರಸ್ವಾಮಿ ಇಬ್ಬರೂ ಭಾಷಣ ಮಾಡಿದ್ದರು. 15 ಲಕ್ಷ ಹಣ ಎಷ್ಟು ಜನರ ಖಾತೆಗೆ ಹೋಗಿದೆ? ಎಷ್ಟು ಉದ್ಯೋಗ ಸಿಕ್ಕಿದೆ ಎಂದು ನಾನು ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರ ಚಿಪ್ಪು ಅಭಿಯಾನ ವಿಚಾರವಾಗಿ, ನಾವು ಚಿಪ್ಪು ಕೊಟ್ಟಿಲ್ಲ. ಕನ್ನಡದ ಬಾವುಟ ಹಿಡಿದು ಹೋರಾಟ ಮಾಡುವವರು ನಾವು, ಕನ್ನಡಿಗರ ಪರವಾಗಿ ನಮ್ಮ ತೆರಿಗೆ, ನಮ್ಮ ಹಕ್ಕು ಹೋರಾಟ ಮಾಡಿದ್ದೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular