ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಸಿಎಂ ಎಂ. ವೀರಪ್ಪ ಮೊಯಿಲಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಪರವಾಗಿ ‘ಸಮೃದ್ಧ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ನನ್ನ ಕನಸು’ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ್ಮಾ, ಭೂತಾನ್ ಜೊತೆಗಿನ ಅಡಿಕೆ ಅಮದು ಒಪ್ಪಂದ ರದ್ದು ಮಾಡಲಿದೆ. ಅಡಿಕೆ ಆಮದಿನಿಂದಾಗಿ ದೇಶಿಯ ಅಡಿಕೆ ಧಾರಣೆ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.