ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೆ.ಪಿ.ನಂಜುಂಡಿ ಅವರನ್ನು ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗಿದೆ.