HomeKarnatakaಲೋಕಸಭಾ ಚುನಾವಣೆ: ಮತದಾನದ ದಿನದಂದು ಮೆಟ್ರೋ ರೈಲು ಸಂಚಾರ ವಿಸ್ತರಣೆ

ಲೋಕಸಭಾ ಚುನಾವಣೆ: ಮತದಾನದ ದಿನದಂದು ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ನಮ್ಮ ಮೆಟ್ರೋ ರೈಲು ಸಂಚಾರ ವಿಸ್ತರಿಸಲಾಗುವುದು ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.

ಎಲ್ಲಾ ನಾಲ್ಕು ಟರ್ಮಿನಲ್ ಗಳಲ್ಲಿ ಅಂದರೆ ನಾಗಸಂಧ್ರ, ರೇಷ್ಮೆ ಸಂಶೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ವರೆಗೆ ವಿಸ್ತರಿಸಲಾಗಿದೆ.

ಮೆಜೆಸ್ಟಿಕ್ ನಿಂದ ಎಲ್ಲಾ ದಿಕ್ಕುಗಳಿಗೆ ಏಪ್ರಿಲ್ 26ರ ಮಧ್ಯರಾತ್ರಿ 12.35ಕ್ಕೆ ಕೊನೇ ಮೆಟ್ರೋ ರೈಲು ಸಂಚರಿಸಲಿದೆ. ಮತದಾನ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೆಟ್ರೋ ಸೇವೆ ಅವಧಿ ವಿಸ್ತರಿಸಲಾಗಿದೆ. ಇದರಿಂದ ಮತದಾನಕ್ಕೆ ಊರುಗಳಿಗೆ ಹೋಗಿ ವಾಪಾಸ್ ಆಗುವವರಿಗೂ ಸಾಕಷ್ಟು ಅನುಕೂಲವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular