HomeIndiaBREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

ಸೂರ್ಯಪೇಟ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಕೆಟ್ಟು ನಿಂತಿದ್ದರಿಂದ ಚಾಲಕ ರಸ್ತೆಯಲ್ಲೇ ನಿಲ್ಲಿಸಿದ್ದಾನೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಎಕ್ಸ್‌ಎಲ್‌6 ವಾಹನದಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಕಾರ್  ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಎರಡು ದಿನಗಳ ಹಿಂದೆ ಸೂರ್ಯಪೇಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವದಂಪತಿಗಳು ಸಾವನ್ನಪ್ಪಿದ್ದರು. ಸೂರ್ಯಪೇಟ್ ಜಿಲ್ಲೆಯ ಮುನಗಲ್ ಮಂಡಲದ ಮುಕುಂದಪುರಂನ ಉಪನಗರದ ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಪ್ರಾಣ ಕಳೆದುಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular