ಬೀದರ್: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಿಎಂ ಸಿದ್ದರಾಮಯ್ಯ, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ನಿಡಲಾಗಿದೆ ಎಂದರು.
ಪ್ರಕರಣದ ತನಿಖೆಯನ್ನು ಸಿಐಡೆ ನಿಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ಗೆ ಕೊಡಬೇಕು ಎಂದು ಹೇಳುತ್ತಿದ್ದಾರೆ. ಇವರ ಸರ್ಕಾರದ ಅವಧಿಯಲ್ಲಿ ಯಾವುದೇ ಕೇಸನ್ನು ಸಿಬಿಐಗೆ ವಹಿಸಿದ್ದರಾ? ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಅನಗತ್ಯ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.