ಹಾಸನ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ನೀರುಗಂಟಿ ಚೆನ್ನಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಒಂದು ಪಕ್ಷದ ಪರವಾಗಿ ಚೆನ್ನಪ್ಪ ಕೆಲಸ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿತ್ತು. ಪರಿಶೀಲನೆ ನಡೆಸಿದಾಗ ಚನ್ನಪ್ಪ ಪಕ್ಷದ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸರ್ಕಾರಿ ಅಧೀನದಲ್ಲಿರುವ ನೌಕರರಾಗಿ ನೀತಿ ಸಂಹಿತೆ ಉಲ್ಲಂಘಿಸಿರುವುದು, ತಮ್ಮ ಕೆಲಸದಲ್ಲಿ ಬೇಜವಾಬ್ದಾರಿ, ನಿರ್ಲಕ್ಷತೆ ತೋರಿ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.