alex Certify BIG NEWS: ಮತಗಟ್ಟೆಗೆ ಬಂದು ಮತದಾನ ಮಾಡಿದ 101 ವರ್ಷದ ಅಜ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಗಟ್ಟೆಗೆ ಬಂದು ಮತದಾನ ಮಾಡಿದ 101 ವರ್ಷದ ಅಜ್ಜಿ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಈ ನಡುವೆ 101 ವರ್ಷದ ಅಜ್ಜಿಯೊಬ್ಬರು ಮೈಸೂರಿನಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. 82 ವರ್ಷ ಮೇಲ್ಪಟ್ಟವರಿಗೆ ಅನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದರೂ ಹಿರಿಯ ಅಜ್ಜಿ ತಾವು ಮತಗಟ್ಟೆಗೇ ಬಂದು ಮತಚಲಾಯಿಸುವುದಾಗಿ ಹೇಳಿ, ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಅಜ್ಜಿಯ ಜೀವನೋತ್ಸಾಹ, ಇಳಿಯವಸ್ಸಿನಲ್ಲಿಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ ರೀತಿ ನಿಜಕ್ಕೂ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಮಾತ್ರವಲ್ಲ ಯುವಜನತೆಯನ್ನು ನಾಚಿಸುವಂತಿದೆ.

ರಾಜ್ಯದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನಿಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...