ಬೆಂಗಳೂರು: ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈವರೆಗೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 189 ಪ್ರಕರಣಗಳು ದಾಖಲಾಗಿವೆ.
ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಈವರೆಗೆ 189 ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನ ಆರೋಪದಲ್ಲಿ 28 ಕೇಸ್, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಕೇಸ್ ಹಾಗೂ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ.
ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದೆ.
ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನವಣಾ ಆಯೋಗ 46.11 ಕೋಟಿ ರೂ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ.