ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಈನಡುವೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತರು. ಚುನಾವಣಾ ಕರ್ತವ್ಯದಲ್ಲಿದ್ದ ಯಶೋಧಮ್ಮ ಲೋಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಲೋ ಬಿಪಿಯಿಂದ ಯಶೋಧಮ್ಮ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ತರಲಾಗಿತ್ತು. ಆದರೆ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.