HomeKarnatakaಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು –ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ –ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ, ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

247 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ. ರಾಜ್ಯದಲ್ಲಿ ಮೊದಲ ಹಂತ ಮತ್ತು ದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಇಂದು ನಡೆದಿದೆ. ಜೂನ್ 4ರ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular