HomeKarnatakaBIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಮೊದಲ ಹಂತದ ಮತದಾನ ದಿನ ಏಪ್ರಿಲ್ 26ರಂದು 2,172 ಚುನಾವಣಾ ಅಕ್ರಮ ಪ್ರಕರಣ ದಾಖಲಾಗಿದೆ.

ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್ ಎಸ್ ಟಿ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು ಉಚಿತ ಉಡುಗರೆಗಳನ್ನು ಜಪ್ತಿ ಮಾಡಿದ್ದು, ಈ ಸಂಬಂಧ 2,172 ಪ್ರಕರಣಗಳನ್ನು ಚುನಾವಣಾ ಆಯೋಗ ದಾಖಲಿಸಿದೆ.

ಅಬಕಾರಿ ಇಲಾಖೆ 3098 ಕೇಸ್ ದಾಖಲಿಸಿದೆ. ಲೈಸನ್ಸ್ ಉಲ್ಲಂಘನೆ ಹಿನ್ನೆಲೆಯಲ್ಲಿ 4,789 ಪ್ರಕರಣ, ಎನ್ ಡಿಪಿಎಸ್ ಕಾಯ್ದೆ ಅಡಿ 177,ಸೆಕ್ಷನ್ 15ರ ಅಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕರಿಗಳು ಒಟ್ಟು 1916 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕದ ಮಾದನಾಯಕನಹಳ್ಳಿ ಬಳಿ 4.80 ಕೋಟಿ ರೂಪಾಯಿಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular