BIG NEWS: ಕಂದಕಕ್ಕೆ ಉರುಳಿಬಿದ್ದ ಪ್ರವಾಸಿಗರ ಬಸ್; 23 ಜನರಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ.

ಬಸ್ 100 ಅಡಿ ಆಳದ ಕಂದಕಕ್ಕೆ ಬಿದ್ದಿದ್ದು, 23 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಸ್ ನಲ್ಲಿ ಬಂದಿದ್ದರು. ಮಾಣಿಕ್ಯಧಾರ, ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಕ್ಕೆ ಆಗಮಿಸಿದ್ದರು, ಈ ವೇಳೆ ದತ್ತಪೀಠ-ಮಾಣಿಕ್ಯಧಾರ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read