HomeKarnatakaಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ...

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ ತಂದೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧವೂ ಹೊಳೆನರಸಿಪುರ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಪ್ರಕರಣದ ಎ1 ಆರೋಪಿ ಹೆಚ್‍.ಡಿ. ರೇವಣ್ಣ, ಎ2 ಆರೋಪಿ ಪ್ರಜ್ವಲ್ ರೇವಣ್ಣ ಆಗಿದ್ದಾರೆ. ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯಿಂದ ದೂರು ದಾಖಲಾಗಿದೆ. ಸಂತ್ರಸ್ತ ಮಹಿಳೆಯ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354 ಎ(ಲೈಂಗಿಕ ಕಿರುಕುಳ ಆರೋಪ), 354 ಡಿ(ಮಹಿಳೆಗೆ ಮುಜುಗರ ಆಗುವಂತೆ ಮಾತನಾಡುವುದು) 506(ಬೆದರಿಕೆ), 509(ಮಹಿಳೆಯ ಮಾನಕ್ಕೆ ಹಾನಿ) ಅಡಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ದೃಶ್ಯಗಳು ಹರಿದಾಡಿದ್ದವು. ಈ ಕುರಿತಾಗಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರ ದೂರಿನ ಅನ್ವಯ ಕೇಸ್ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular