ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು ಹೇಳಲಾಗಿದೆ. ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ.
ಗೊಲ್ಲಹಳ್ಳಿಗೆ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ತಂದೆ, ಮಗಳು ಕೆರೆ ನೋಡಲು ಹೋಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳುವಾಗ ಮಗಳು ಫಾತಿಮಾ ಕೆರೆಗೆ ಬಿದ್ದಿದ್ದು, ರಕ್ಷಿಸಲು ಇಳಿದ ತಂದೆ ಆಯೂಬ್ ಕೂಡ ಸಾವನ್ನಪ್ಪಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.