HomeIndiaಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು...

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಫಿಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ದೋಯಿ-ಉನ್ನಾವೋ ರಸ್ತೆಯ ಜಮಾಲ್ದಿಪುರ್ ಗ್ರಾಮದ ಬಳಿ ಭಾನುವಾರ ಅಪಘಾತ ಸಂಭವಿಸಿದೆ. ಸಫಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಗಾಯಾಳುಗಳನ್ನು ಉನ್ನಾವೋ ಮತ್ತು ಕಾನ್ಪುರದ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸರ್ಕಲ್ ಆಫೀಸರ್ ಸಫಿಪುರ್ ರಿಷಿಕಾಂತ್ ಶುಕ್ಲಾ, ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರಿದ್ದರು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಗೊಂಡ 20 ಮಂದಿಯಲ್ಲಿ 11 ಮಂದಿಯನ್ನು ಕಾನ್ಪುರಕ್ಕೆ ಕಳುಹಿಸಲಾಗಿದ್ದು, 9 ಮಂದಿಯನ್ನು ಉನ್ನಾವೋದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗಳಾಗಿರುವ ಕೆಲವು ಪ್ರಯಾಣಿಕರನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular