ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿ ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದ್ದಾರೆ.

ಹೊಸಪೇಟೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಮೋದಿ ಇಂದು ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆ, ವಿಜಯಪುರ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದು, ಬಾಗಲಕೋಟೆ ನವನಗರದ 100 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ.

ಮಧ್ಯಾಹ್ನ 12.10ಕ್ಕೆ ಬಾಗಲಕೋಟೆ ಹೆಲಿಪ್ಯಾಡ್ ಗೆ ಮೋದಿ ಆಗಮಿಸಲಿದ್ದಾರೆ. ನಂತರ ಸಮಾವೇಶದ ವೇದಿಕೆಗೆ ಆಗಮಿಸಲಿರುವ ಮೋದಿ 12:15 ರಿಂದ 12:55 ರವರೆಗೆ ಸಮಾವೇಶದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆಯಿಂದ ಪ್ರಯಾಣ ಬೆಳೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read