HomeKarnatakaBREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ...

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ.

ಕೆಲವು ದಿನಗಳಿಂದ ಹರಿದಾಡುತ್ತಿರುವ ವಿಡಿಯೋದಿಂದ ಮುಜುಗರ ಉಂಟಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ರೇವಣ್ಣ ತಪ್ಪಿತಸ್ಥರು ಎನ್ನುವ ಭಾವನೆ ಉಂಟಾಗಿದೆ. ದೇವೇಗೌಡರು, ಕುಮಾರಸ್ವಾಮಿ ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸುವ ಮೂಲಕ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆಯಲ್ಲಿ ತೆನೆ ಹೊತ್ತ ಮಹಿಳೆಯ ಚಿತ್ರ ಇದೆ. ಈ ಚಿತ್ರ ಹೆಣ್ಣಿನ ಗೌರವವನ್ನು ಪ್ರತಿಪಾದಿಸುತ್ತದೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿದೆ. ಪಕ್ಷ ಕೂಡ ಆಂತರಿಕ ಸಮಿತಿ ರಚನೆ ಮಾಡಿ ಸತ್ಯಾಸತ್ಯತೆ ತಿಳಿಸಬೇಕು. ಈ ಪ್ರಕರಣದಿಂದ ಸದ್ಯಕ್ಕೆ ಜೆಡಿಎಸ್ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಬೇಕು ಎಂದು ಶಾಸಕ ಶರಣಗೌಡ ಕಂದಕೂರ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular