alex Certify ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ.

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಕ್ಷಿಣದ ಕಾಂಗ್ರೆಸ್ ಶಾಸಕರಿಗೆ ಜವಾಬ್ದಾರಿ ನೀಡಿದ್ದಾರೆ.

ಆಡಳಿತರೂಢ ಕಾಂಗ್ರೆಸ್ ಪಕ್ಷದ ದಕ್ಷಿಣ ಕರ್ನಾಟಕದ 49 ಶಾಸಕರನ್ನು ಎರಡನೇ ಹಂತದಲ್ಲಿ ಉತ್ತರ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಿಗೆ ನಿಯೋಜಿಸಲಾಗಿದೆ. ಹಿರಿಯ ಸಚಿವರಿಗೆ ಲೋಕಸಭಾ ಕ್ಷೇತ್ರವಾರು ಹೆಚ್ಚುವರಿ ಉಸ್ತುವಾರಿ ನೀಡಿದ ನಂತರ ಪಕ್ಷದ ಶಾಸಕರನ್ನು ಕೂಡ ವಿಧಾನಸಭಾ ಕ್ಷೇತ್ರವಾರು ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಮೊದಲ ಹಂತದ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳ ವ್ಯಾಪ್ತಿಯ 49 ಶಾಸಕರಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸಂಬಂಧಿತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಉಳಿದು ಸ್ಥಳೀಯ ನಾಯಕರೊಂದಿಗೆ ಸಮನ್ವಯತೆ ಕಾಯ್ದುಕೊಂಡು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗುವಂತೆ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...