ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ… pic.twitter.com/E0M7JWez3h— Siddaramaiah (@siddaramaiah) April 29, 2024
ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ… pic.twitter.com/H5d7XiWhQl
— B.S.Yediyurappa (@BSYBJP) April 29, 2024
ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ.
ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/sYhfJI0kZD— H D Devegowda (@H_D_Devegowda) April 29, 2024
ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು… pic.twitter.com/pFFtedqqMs
— DK Shivakumar (@DKShivakumar) April 29, 2024
ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ.
ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್… pic.twitter.com/MFolgj1hq0
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 29, 2024
ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ… pic.twitter.com/8cqFNkP1JL
— Vijayendra Yediyurappa (@BYVijayendra) April 29, 2024


