HomeIndiaBREAKING NEWS: ಮತದಾನಕ್ಕೂ ಮುನ್ನ ಕಾಂಗ್ರೆಸ್ ಗೆ ಬಿಗ್ ಶಾಕ್; ನಾಮಪತ್ರ ಹಿಂಪಡೆದ 'ಕೈ' ಅಭ್ಯರ್ಥಿ....!

BREAKING NEWS: ಮತದಾನಕ್ಕೂ ಮುನ್ನ ಕಾಂಗ್ರೆಸ್ ಗೆ ಬಿಗ್ ಶಾಕ್; ನಾಮಪತ್ರ ಹಿಂಪಡೆದ ‘ಕೈ’ ಅಭ್ಯರ್ಥಿ….!

ಲೋಕಸಭಾ ಚುನಾವಣೆಗೆ ಈಗಾಗಲೇ ಎರಡು ಹಂತದ ಮತದಾನ ನಡೆದಿದ್ದು, ಮೂರನೇ ಹಂತದ ಮತದಾನಕ್ಕೆ ಸಿದ್ಧತೆ ನಡೆದಿರುವ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಎದುರಾಗಿದೆ.

ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಕ್ಷಯ್ ಕಾಂತಿ ಬಾಮ್ ಮತದಾನಕ್ಕೂ ಮುನ್ನ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಅವರ ಜೊತೆ ಚುನಾವಣಾ ಅಧಿಕಾರಿಗಳ ಕಚೇರಿಗೆ ಬಂದ ಅಕ್ಷಯ್ ಕಾಂತಿ ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದು, ಅವರನ್ನು ವಿಜಯ್ ವರ್ಗೀಯ ಬಿಜೆಪಿಗೆ ಸ್ವಾಗತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular