HomeIndiaSC, ST, OBC ಮೀಸಲಾತಿ ತೆಗೆಯುವುದಾಗಿ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ಕೇಸ್: ತೆಲಂಗಾಣ...

SC, ST, OBC ಮೀಸಲಾತಿ ತೆಗೆಯುವುದಾಗಿ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ಕೇಸ್: ತೆಲಂಗಾಣ ಸಿಎಂಗೆ ದೆಹಲಿ ಪೊಲೀಸರ ಸಮನ್ಸ್

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ತಿರುಚಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.

ಅಮಿತ್ ಶಾ ಅವರ ವೀಡಿಯೊಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗಾಗಿ ಮೇ 1 ರಂದು ದೆಹಲಿ ಪೊಲೀಸರ ಐಎಫ್‌ಎಸ್‌ಒ ಘಟಕ(ಸೈಬರ್ ಘಟಕ) ಮುಂದೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಕ್ಸ್‌ ನಲ್ಲಿ ನಕಲಿ ವೀಡಿಯೊವನ್ನು ಪೋಸ್ಟ್ ಮಾಡಲು ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ನೊಂದಿಗೆ ಹಾಜರಾಗುವಂತೆ ರೆಡ್ಡಿ ಅವರಿಗೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಮಿತ್ ಶಾ ರ ರ್ಯಾಲಿಯ ಟ್ಯಾಂಪರ್ಡ್ ವಿಡಿಯೋ ಕುರಿತು ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿದ ನಂತರ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ಒಂದು ದಿನದ ನಂತರ ಸಮನ್ಸ್ ಬಂದಿದೆ.

ವಿಶೇಷ ಕೋಶವು ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಷನ್‌ಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ.

ದೆಹಲಿ ಪೊಲೀಸರ ತನಿಖೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರೇವಂತ್ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಗೆಲ್ಲಲು ದೆಹಲಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಇಲ್ಲಿಯವರೆಗೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಚುನಾವಣೆ ಗೆಲ್ಲಲು ಇಡಿ, ಸಿಬಿಐ ಮತ್ತು ಆದಾಯ ತೆರಿಗೆಯನ್ನು ಬಳಸುತ್ತಿದ್ದರು. ಆದರೆ, ಇಂದು ದೆಹಲಿ ಪೊಲೀಸರು ತೆಲಂಗಾಣ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ತಲುಪಿದ್ದಾರೆ ಎಂದು ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular