HomeIndiaಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಮೇ 7 ರಿಂದ ಜೂ. 30ರ ಅವಧಿಗೆ ಈ ಆದೇಶ ಸೀಮಿತವಾಗಿರುತ್ತದೆ. ಇ- ಈ ಪಾಸ್ ಕುರಿತು ನಿಯಮಾವಳಿ ರೂಪಿಸಿ ತಮಿಳುನಾಡು ಸರ್ಕಾರ ರಾಷ್ಟ್ರಮಟ್ಟದಲ್ಲಿ ಜಾಹೀರಾತು ನೀಡುವ ಮೂಲಕ ಪ್ರಚುರಪಡಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಇ-ಪಾಸ್ ಇಲ್ಲದ ವಾಹನಗಳಿಗೆ ಗಿರಿಧಾಮಗಳಿಗೆ ಭೇಟಿಗೆ ಅವಕಾಶ ನೀಡಬಾರದು, ಪಾಸ್ ವಿತರಣೆಗೆ ಯಾವುದೇ ನಿಯಂತ್ರಣ ಹೇಳಲು ಸ್ಥಳೀಯರಿಗೆ ಇ- ಪಾಸ್ ಅನ್ವಯಿಸದು ಎಂದು ಹೈಕೋರ್ಟ್ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕಾಗಿ ಮಾರ್ಗಸೂಚಿ ರೂಪಿಸಬೇಕು. ಜಿಲ್ಲಾಡಳಿತ ಮೂಲಕ ಜಾರಿಗೊಳಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಊಟಿಗೆ ಪ್ರತಿದಿನ ಸುಮಾರು 1300 ವಾಹನಗಳು ಬರುತ್ತವೆ. ಮೇ ನಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಗಿರಿಧಾಮದ ರಸ್ತೆಗಳಿಗೆ ವಾಹನಗಳ ಹೊರೆ ತಡೆಯುವ ಸಾಮರ್ಥ್ಯವಿಲ್ಲ. ಸ್ಥಳೀಯರ ಸಂಚಾರಕ್ಕೆ, ಕಾಡುಪ್ರಾಣಿಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಬೆಂಗಳೂರಿನ ಐಐಎಂ ಮತ್ತು ಮದ್ರಾಸ್ ಐಎಟಿ ಜಂಟಿ ಅಧ್ಯಯನ ತಂಡ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಮದ್ರಾಸ್ ಹೈಕೋರ್ಟ್ ಇ-ಪಾಸ್ ಕಡ್ಡಾಯಗೊಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular