HomeKarnatakaಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ...

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡರ ನಿಯೋಗ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಮಾಧ್ಯಮ ವಿಭಾಗದ ಮುಖ್ಯಸ್ಥ ಕೆ.ಟಿ. ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ನೇತೃತ್ವದ ನಿಯೋಗ ಸೋಮವಾರ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಭೇಟಿಯಾಗಿ ದೂರು ನೀಡಿದೆ.

ಹಾಸನ ಜಿಲ್ಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲವರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಭರದಲ್ಲಿ ಜೆಡಿಎಸ್ ನಾಯಕರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ವಿರುದ್ಧ ಅತ್ಯಂತ ಅಪಮಾನಕರ ಮತ್ತು ಕೀಳಾಗಿ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular