ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
ಈ ಮಧ್ಯೆ ರಾಜ್ಯ ಮಹಿಳಾ ಆಯೋಗ ಕೂಡ ಡಿಜಿ-ಐಜಿಪಿ ಹಾಗೂ ಎಸ್ ಐಟಿಗೆ ಪತ್ರ ಬರೆದಿದ್ದು, ವಿಡಿಯೋಗಳು ವೈರಲ್ ಆಗದಂತೆ ತಡೆಯುವಂತೆ ತಿಳಿಸಿದೆ.
ವಿಡಿಯೋ ಲೀಕ್ ಮಾಡಿದ್ದು ಯಾರು? ಎಂಲ್ಲಿಂದ? ಕ್ರಿಮಿನಲ್ ಮೊಕದ್ದಮೆ ಅಡಿಯಲ್ಲಿ ಪ್ರಕರಣದ ತನಿಖೆ ನಡೆಯಬೇಕು ಎಂದು ಸೂಚಿಸಿದೆ.