ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಾಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿ ಫಯಾಜ್ ನನ್ನು ವಿಚಾರಣೆಗಾಗಿ ಸಿಐಡಿ ಪೊಲೀಸರು 6 ದಿನಗಳ ಕಾಲ ಕಸ್ಟಡಿಗೆ ಪ್ಡೆದಿದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ 1ನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಫಯಾಜ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಆರೋಪಿ ಫಯಾಜ್ ನನ್ನು ಪೊಲೀಸರು ಧಾರವಾಡದ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದಾರೆ.
ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠಳನ್ನು ಚಾಕುವಿನಿಂದ ಇರಿದು ಫಯಾಜ್ ಹತ್ಯೆ ಮಾಡಿದ್ದ. ಘಟನೆ ನಡೆದ ಒಂದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.