alex Certify ಗೀತಾ ಶಿವರಾಜ್‌ ಕುಮಾರ್‌ ಪರ ನಾಳೆ ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೀತಾ ಶಿವರಾಜ್‌ ಕುಮಾರ್‌ ಪರ ನಾಳೆ ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಜುಲೈ 30 ರಂದು ಕಾಂಗ್ರೆಸ್ ಗೆ ಮಧು ಬಂಗಾರಪ್ಪ - Saaksha TV

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ದತೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.

ಅವರು ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್‌ಗಾಂಧಿಯವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯದರ್ಶಿ ಮಯೂರು ಜಯಕುಮಾರ್ ಹಾಗೂ ಇನ್ನಿತರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಸುಮಾರು 1ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬೈಂದೂರು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದಲೂ ಸಹ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಈ ಬಾರಿ ಮತ ಯಾಚನೆಯಲ್ಲಿ ʼನಮ್ಮ ಬೂತ್ ನಮ್ಮ ಜವಾಬ್ದಾರಿʼ ಘೋಷ ವಾಕ್ಯದೊಂದಿಗೆ ಎಲ್ಲರೂ ಒಟ್ಟಾಗಿ ಮತಯಾಚಿಸುತ್ತಿರುವುದರಿಂದ ಗೀತಾಶಿವರಾಜ್‌ಕುಮಾರ್ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಹಾಗೆಯೇ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ನಟ ಶಿವರಾಜ್‌ಕುಮಾರ್ ಅವರು ಸಹ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮತಯಾಚಿಸಿದ್ದಾರೆ ಎಂದ ಅವರು ಮೇ 4ರಂದು ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿಯಲ್ಲಿ ರೋಡ್ ಶೋ ಹಾಗೂ ಕಾರ್ನರ್ ಸಭೆ ನಡೆಸಲಾಗುವುದು ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...