HomeKarnatakaBREAKING: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ HD ಕುಮಾರಸ್ವಾಮಿ ಹೊಸ ಟ್ವಿಸ್ಟ್

BREAKING: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ HD ಕುಮಾರಸ್ವಾಮಿ ಹೊಸ ಟ್ವಿಸ್ಟ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿಡಿಯೋ ಬಿಟ್ಟಿದ್ದು ಎನ್ನುತ್ತಾರೆ. ಈಗ ಕಾರ್ತಿಕ್ ಎಲ್ಲಿದ್ದಾನೆ? ಚಾಲಕ ಕಾರ್ತಿಕ್ ನನ್ನು ಮಲೇಷ್ಯಾಕ್ಕೆ ಕಳಿಸಿಕೊಟ್ಟವರು ಯಾರು? ನಿನ್ನೆ ಚಾಲಕ ವಿಡಿಯೋ ಬಿಡುಗಡೆ ಮಾಡಿದ್ದಾನಲ್ಲವೇ? ಆತ ಮಾತನಾಡಿರುವ ವಿಡಿಯೋ ಮಾಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ನಿನ್ನೆ ಅವನ ಕೈಯಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಆತ ಏನು ಹೇಳಿಕೆ ಕೊಟ್ಟಿದ್ದಾನೆ? ತರಾತುರಿಯಲ್ಲಿ ಆತ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದು ಹೇಗೆ? ನನಗೂ ಎಲ್ಲಾ ಮಾಹಿತಿ ಇದೆ. ನನ್ನನ್ನು ಕೆಣಕಿದ್ದಾರೆ. ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಚಾಲಕ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ಲ, ಚಿಲ್ಲರೆ ಅಣ್ಣತಮ್ಮಂದಿರು ಏನು ಹೇಳಿದರು? ಹೆಚ್.ಡಿ. ಕುಮಾರಸ್ವಾಮಿಗೆ ಬಿಟ್ಟಿದ್ದು ಅಂತಾರೆ ಅಲ್ವಾ? ಚಾಲಕ ಕಾರ್ತಿಕ್ ಈಗ ಎಲ್ಲಿದ್ದಾನೆ? ಕಾರ್ತಿಕ್ ಮಲೇಷ್ಯಾದಲ್ಲಿ ಇದ್ದಾನೆ ಆತನನ್ನು ಕಳಿಸಿದವರು ಯಾರು? ನಮ್ಮನ್ನು ಕೆಣಕಿದವರ ಸುಲಭವಾಗಿ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular