ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆಯಾಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಂಡ ನಂತರ ಪ್ರಜ್ವಲ್ ಪೆನ್ ಡ್ರೈವ್ ಹೊರಬಂತು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರ ಜೊತೆಗೆ ನಾವು ಇರುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದ ಅಮಿತ್ ಶಾ, ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ? ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ. ನಾವು ಬೆಂಬಲಿಸುತ್ತೇವೆ. ಆದರೆ ಇಂತಹ ಪ್ರಕರಣದಲ್ಲಿಯೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.