alex Certify ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ.

ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಲೀಡ್ ಕಡಿಮೆ ಕೊಟ್ಟರೆ ಕರೆಂಟ್ ಕೊಡುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕಡಿಮೆಯಲ್ಲಿ ನೀಡಿದ್ದಕ್ಕೆ ಕರೆಂಟ್ ತೆಗಿತಾ ಇದ್ದೇವೆ ಅಷ್ಟೇ, ಮತ್ತೆ ಲೋಕಸಭೆ ಚುನಾವಣೆಯಲ್ಲಿ ಕೊಡಲಿಲ್ಲ ಎಂದರೆ ಕರೆಂಟ್ ಕೊಡುವುದೇ ಇಲ್ಲ. ಸಂಪೂರ್ಣ ಕಟ್ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ರಾಜು ಕಾಗೆ ಅವರ ಕರೆಂಟ್ ಕಟ್ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ರಾಜು ಕಾಗೆ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...