HomeKarnatakaBIG NEWS: ಬಿಟ್ ಕಾಯಿನ್ ಹಗರಣ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; DYSP ಶ್ರೀಧರ್ ಕೆ.ಪೂಜಾರ್...

BIG NEWS: ಬಿಟ್ ಕಾಯಿನ್ ಹಗರಣ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; DYSP ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈ ಎಸ್ ಪಿ ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಶ್ರೀಧರ್ ಕೆ.ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಶ್ರೀಧರ್ ಕೆ.ಪೂಜಾರ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪ್ರಶ್ನಿಸಿ ಶ್ರೀಧರ್ ಕೆ.ಪೂಜಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ. ಮೇ 8ರಂದು ಬೆಳಿಗ್ಗೆ 9 ಗಂಟೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಸಂಜೆ 6 ಗಂಟೆಯವರೆಗೆ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕು.

ಬಳಿಕ 2 ಲಕ್ಷ ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸ್ ತನಿಖೆಗೆ ಶ್ರೀಧರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೆ ಪೊಲೀಸರು ಆಕ್ಷೇಪಿಸಬಾರದು ಎಂದು ನ್ಯಾ.ವಿ.ಶಿವಾನಂದ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular