HomeKarnatakaBREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಹೆಚ್.ಡಿ.ರೇವಣ್ಣ

BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ವಿರುದ್ಧ ಹೊಳೆನರಸಿಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಎಸ್ ಐಟಿ ವಿಚಾರಣೆ ಚುರುಕುಗೊಳಿಸಿದ್ದು, ಹೆಚ್.ಡಿ.ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ. ಆದರೆ ಹೆಚ್.ಡಿ.ರೇವಣ್ಣ ಈವರೆಗೂ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಇಂದು ವಿಚಾರಣೆಗೆ ಹಾಜರಾಗದಿದ್ದಲ್ಲಿ ಅವರನ್ನು ಬಂಧಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರು.

ಬಂಧನ ಭೀತಿಯಲ್ಲಿರುವ ಹೆಚ್.ಡಿ.ರೇವಣ್ಣ ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular