ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.
ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿರುವ ಬಿಜೆಪಿ ವಿರುದ್ದವೂ ಎಸ್ಐಟಿ ತನಿಖೆ ನಡೆಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ತೂಗುವ ಕತ್ತಿಯಿಂದ ಪಾರಾದರೆ ನೂರು ವರ್ಷ ಆಯಸ್ಸು ಎನ್ನುವಂತೆ ಬಿಜೆಪಿಯವರು ಹೇಗಾದರೂ ಮಾಡಿ ಪ್ರಕರಣ ಮುಚ್ಚಿ ಹಾಕುವ ಮೂಲಕ ಪ್ರಜ್ವಲ್ ಅವರನ್ನು ಪಾರು ಮಾಡಲು ಸಂಚು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ನಾಲ್ಕು ತಿಂಗಳ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣನವರ ಸಿಡಿಗಳಿವೆ ಎಂದು ಹೇಳಿದ್ದರು. ಬಿಜೆಪಿ ನಾಯಕರಿಗೆ ಪತ್ರ ಕೂಡ ಬರೆದು ಪ್ರಜ್ವಲ್ ರೇವಣ್ಣರಿಗೆ ಟಿಕೆಟ್ ನೀಡಿದಂತೆ ಮನವಿ ಮಾಡಿದ್ದರು. ಈಗ ಪ್ರಕರಣ ಬೆಳಕಿಗೆ ಬಂದಿದ್ದು, ಬಿಜೆಪಿಯವರು ಮುಚ್ಚಿ ಹಾಕಲು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದ್ದಾರೆ.