HomeIndiaBREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಈ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಂತಿಮವಾಗಿ ಪ್ರಿಯಾಂಕಾ ಗಾಂಧಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಅವರು ಸ್ಪರ್ಧೆಯಿಂದ ದೂರ ಉಳಿದಿದ್ದು, ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ವಯನಾಡು ಜೊತೆಗೆ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿಯಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಅಮೇಥಿ ಕ್ಷೇತ್ರದಿಂದ ಕೆಎಲ್ ಶರ್ಮಾ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular