HomeCrimeಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಂಬಕ್ಕೆ ಕಟ್ಟಿ ಹನುಮವ್ವ ಮೆಡ್ಲೇರಿ(50) ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಚಂದ್ರಪ್ಪ, ಗಂಗಪ್ಪ, ಗುತ್ಯವ್ವ ಎಂಬುವರು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಮಹಿಳೆಯ ಪುತ್ರ ಮಂಜುನಾಥ ಯುವತಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular