ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಕಣಕ್ಕಿಳಿದಿದ್ದಾರೆ.
ಸಹಜವಾಗಿಯೇ ಇದು ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೆ ಶಾಕ್ ಎದುರಾಗಿದೆ. ಉಮೇಶ್ ಜಾಧವ್ ಅವರ ಹತ್ತಿರದ ಸಂಬಂಧಿ ಹಾಗೂ ಬಂಜಾರ ಸಮಿತಿ ಅಧ್ಯಕ್ಷ ವಿಠ್ಠಲ್ ಜಾಧವ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.