ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಎಲ್ಲೇ ಎಸ್ಕೇಪ್ ಆಗಿರಲಿ, ಯಾವ ದೇಶದಲ್ಲಿಯೇ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಕರೆ ತರುತ್ತೇವೆ. ಪಾಸ್ ಪೋರ್ಟ್ ರದ್ದಾದ ಮೇಲೆ ವಿದೇಶದಲ್ಲಿ ಇರುವಂತಿಲ್ಲ. ಪ್ರಜ್ವಲ್ ಎಲ್ಲೇ ಇದ್ದರೂ ಕರ್ನಾಟಕಕ್ಕೆ ಬರಲೇಬೇಕಲ್ವಾ? ಎಂದರು.
ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡುವಂತೆ ಪ್ರಧಾನಿ ಮೋದಿಯವರಿಗೆ ನಾನು ಪತ್ರ ಬರೆದಿದ್ದೇನೆ. ಪಾಸ್ ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಹಾಗಾಗಿ ಮೊದಲು ಪಾಸ್ ಪೋರ್ಟ್ ರದ್ದು ಮಾಡಲಿ ಎಂದು ಹೇಳಿದರು. ಕೇಂದ್ರ ಸರ್ಕಾರವೇ ಪ್ರಜ್ವಲ್ ರಕ್ಷಣೆ ಮಾಡುತ್ತಿದೆ ಎಂದು ಕಿಡಿಕಾರಿದರು.